ಬೆಂಗಳೂರು: ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಶಾಸಕಿಯಾಗಿ ಮೊದಲ ಬಾರಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ವಿಧಾನಸೌಧದ ಮೆಟ್ಟಿಲುಗಳಿಗೆ
ನಮಿಸಿ ಪ್ರವೇಶ ಮಾಡಿದರು. ನೂತನ ಸರಕಾರದ ಮೊದಲ ಅಧಿವೇಶನ ಇಂದು ಆರಂಭಗೊಂಡಿದೆ. ಮೊದಲ ಬಾರಿಗೆ ಶಾಸಕಿಯಾಗಿ ಸುಳ್ಯ ಕ್ಷೇತ್ರದಿಂದ ಆಯ್ಕೆಯಾದ ಭಾಗಿರಥಿ ಇಂದು ಪ್ರಥಮ ಬಾರಿಗೆ ವಿಧಾನ ಸಭೆಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ನಮಿಸಿ ಪ್ರವೇಶ ಪಡೆದರು.