ಕಡಬ: ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಆರೋಗ್ಯಧಿಕಾರಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ಜೊತೆ ಆರೋಗ್ಯ ಕೇಂದ್ರದ ಕುರಿತು
ಮಾಹಿತಿಯನ್ನು ಪಡೆದುಕೊಂಡರು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ಬೇಕಾದ ಸಿಬ್ಬಂದಿಗಳು, ಚಿಕಿತ್ಸೆಗೆ ಬೇಕಾದ ಸಲಕರಣೆಗಳು ಅತೀ ಶೀಘ್ರವಾಗಿ ಒದಗಿಸಿಕೊಡಲು ಪ್ರಯತ್ನ ನಡೆಸಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ತಾಲೂಕಿನ ಉತ್ತಮ ಆರೋಗ್ಯ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಕೃಷ್ಣ ಶೆಟ್ಟಿ ಕಡಬ ಹಾಗೂ ಮತ್ತಿತರ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.