ಧರ್ಮಸ್ಥಳ: ಧರ್ಮಸ್ಥಳ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಸೋಮವಾರ ಪೂರ್ವಾಹ್ನ ಒಂಭತ್ತು ಗಂಟೆಯಿಂದ
ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಅಪರಾಹ್ನ ನಾಲ್ಕು ಗಂಟೆಯಿಂದ ನಾಂದಿಮಂಗಲ ಕಾರ್ಯಕ್ರಮ ನಡೆಯಿತು.
ಪೂಜ್ಯ ೧೦೫ ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.
ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಇಂದು ಪಾದಾಭಿಷೇಕ : ಮಂಗಳವಾರ ಬೆಳಿಗ್ಯೆ 8.30ರಿಂದ ಬೀಡಿನಿಂದ ರತ್ನಗಿರಿಗೆ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ ನಡೆಯುತ್ತದೆ.
ಕಾರ್ಕಳ ಜೈನಮಠದ ಪೂಜ್ಯ ಲಲಿಕೀರ್ತಿಭಟ್ಟಾರಕರ ಸ್ವಾಮೀಜಿ ಮಂಗಲಪ್ರವಚನ ನೀಡುವರು.





