ಸುಳ್ಯ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಲ್ಸೂರು ಗ್ರಾಮದ ಬೈತ್ತಡ್ಕ ಎಂಬಲ್ಲಿ ಬೊಲೆರೊ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ.
ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೋ ಹಾಗೂ
ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಬೈತಡ್ಕ ತಿರುವಿನಲ್ಲಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ಕು ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ ತಿಳಿದುಬಂದಿದೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದೆ.