ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ನ ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಾಧಿಕಾರಿಗಳ ಸಭೆಯು ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ
ಸೆ.28 ರಿಂದ ಅ.4ರ ತನಕ ನಡೆಯಲಿರುವ ಭಜನಾ ತರಬೇತಿ ಕಮ್ಮಟದಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮತ್ತು ಧಮರ್ಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಪಾಲ್ಗೋಳ್ಳುವ ಭಜನಾ ಮಂಡಳಿಗಳ ಕುರಿತು ಮಂಜುನಾಥೇಶ್ವರ ಭಜನಾ ಪರಿಷತ್ನ ರಾಜ್ಯಾಧ್ಯಕ್ಷ ಚಂದ್ರಶೇಖರ ಸಾಲಿಯಾನ್ ಮಾಹಿತಿ ನೀಡಿದರು.ಸುಳ್ಯ ಸುಳ್ಯ ತಾಲೂಕಿನಲ್ಲಿ ನಡೆಯುವ 10ನೇ ವರ್ಷದ ಭಜನೋತ್ಸವ ಕಾರ್ಯಮ್ರಮದ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲಾಯಿತು.
ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸಂಚಾಲಕ ಮಾಧವ ಗೌಡ ಮಾತನಾಡಿ ಪದಾಧಿಕಾರಿಗಳ ಜವಾಬ್ದಾರಿಯ ಬಗ್ಗೆ ತಿಳಿಸಿದರು.ಸಭೆಯಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಮನ್ವಯಾಧಿಕಾರಿ ಸಂತೋಷ್, ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ಕಾರ್ಯದರ್ಶಿ
ಸತೀಶ್ ಟಿ.ಎನ್, ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಉಪಾಧ್ಯಕ್ಷರಾದ, ನಾರಾಯಣ ಕೊಡ್ತುಗುಳಿ, ಸಂಧ್ಯಾ ಮಂಡೆಕೋಲು, ಜೊತೆ ಕಾರ್ಯದರ್ಶಿ ಜಯಪ್ರಕಾಶ್ ಕಲ್ಲಪಳ್ಳಿ ಉಪಸ್ಥಿತರಿದ್ದರು. ತಾಲೂಕು ಮತ್ತು ವಲಯದ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೇಲ್ವಿಚಾರಕರಾದ ಜಯಶ್ರೀ ಸ್ವಾಗತಿಸಿ, ಸವಿತಾ ವಂದಿಸಿದರು.












