ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ, ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ವಲಯ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಸುಳ್ಯ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಆರಂಭಗೊಂಡಿತು.ಮೇ 4 ರಿಂದ 11 ರ ತನಕ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯುವ ಶಿಬಿರವನ್ನು ಸುಳ್ಯ ತಾಲೂಕು ಮಂಜುನಾಥೇಶ್ವರ ಭಜನಾ ಪರಿಷತ್ನ ಅಧ್ಯಕ್ಷ
ಸೋಮಶೇಖರ ಪೈಕ ಉದ್ಘಾಟಿಸಿದರು. ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ಸುಳ್ಯ ವಲಯ ನಿರ್ದೇಶಕರಾದ ಜಯಪ್ರಕಾಶ್ ಪೆರುಮುಂಡ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ಗೌರವಾಧ್ಯಕ್ಷ ಯತೀಶ್ ರೈ ದುಗಲಡ್ಕ, ಕಾರ್ಯದರ್ಶಿ ಸತೀಶ್ ಟಿ.ಎನ್, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸುಳ್ಯ ವಲಯದ ಅಧ್ಯಕ್ಷ ಮನೋಹರ್ ಕೆ, ಉದ್ಯಮಿ ನಾರಾಯಣ ಕೇಕಡ್ಕ, ಶಶಿಕಲಾ ಹರಪ್ರಸಾದ್, ಭಾರತಿ ಉಳುವಾರು, ನಳಿನಾಕ್ಷಿ ಕಲ್ಮಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಭಜನಾ ಕೈಪಿಡಿಯನ್ನು ಅತಿಥಿಗಳು ಬಿಡುಗಡೆಗೊಳಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ದಿನೇಶ್ ಸ್ವಾಗತಿಸಿದರು, ಸವಿತಾ ಸಂದೇಶ್ ವಂದಿಸಿದರು.ಸುರೇಶ್ ನಿರೂಪಿಸಿದರು.












