ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ ಆಯ್ಕೆಯಾಗಿದ್ದಾರೆ. ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಸ್ಪೀಕರ್ ಆಗಿ ಶಾಸಕ ವಾಸುದೇವ್ ದೇವ್ನಾನಿ ಅವರನ್ನು ನೇಮಿಸಲಾಗಿದೆ. ಸಿಎಂ ರೇಸ್ನಲ್ಲಿದ್ದ
ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ
ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೃಷ್ಣವ್, ಸಂಸದರಾದ ಬಾಬಾ ಬಾಲಕನಾಥ್, ದಿಯಾ ಕುಮಾರಿ ಸೇರಿದಂತೆ ಅನೇಕ ಹಿರಿಯ ನಾಯಕರನ್ನು ಹಿಂದಿಕ್ಕಿ ಭಜನ್ಲಾಲ್ ಶರ್ಮಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ವೀಕ್ಷಕರಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸರೋಜ್ ಪಾಂಡೆ ಮತ್ತು ವಿನೋದ್ ತಾವ್ಡೆ ಅವರು ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡ ನಂತರ ಭಜನ್ಲಾಲ್ ಶರ್ಮಾ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್ 69 ಸ್ಥಾನಗಳಲ್ಲಿ ಜಯಿಸಿದೆ.









