ಪೇರಾಲು:ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಡಿ.22 ರಂದು ನಡೆಯಿತು.
ಡಿ.22ರಂದು ಆದಿತ್ಯವಾರ ಪೂರ್ವಾಹ್ನ ಗಂಟೆ 8ರಿಂದ ಗಣಪತಿಹೋಮ, ಬ್ರಹ್ಮಕಲಶಪೂಜೆ ನಡೆದು ಹಗಲು 10-23ರ ಕುಂಭ ಲಗ್ನ ಸುಮೂಹೂರ್ತದಲ್ಲಿ ಶ್ರೀ ದೈವಗಳ ಪ್ರತಿಷ್ಠೆ ಮತ್ತು
ಬ್ರಹ್ಮಕಲಶಾಭಿಷೇಕ ನಡೆಯಿತು. ಬಳಿಕ ಮಹಾಪೂಜೆ ನಿತ್ಯನೈಮಿತ್ಯಾದಿಗಳ ನಿರ್ಣಯ,ಪ್ರಸಾದ ವಿತರಣೆ,ಮಧ್ಯಾಹ್ನ ಗಂಟೆ 1ರಿಂದ ಅನ್ನ ಸಂತರ್ಪಣೆ ನಡೆಯಿತು. ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.
ಪೇರಾಲು ಶ್ರೀ ಬಜಪ್ಪಿಲ ಕ್ಷೇತ್ರದ ಅನುವಂಶಿಕ ಆಡಳಿತ ಮೊಕೇಸರರಾದ ಹೇಮಂತ್ಕುಮಾರ್ ಗೌಡರಮನೆ, ಶ್ರೀ ಕ್ಷೇತ್ರ ಬಜಪ್ಪಿಲದ
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಬಾಳೆಕೋಡಿ, ಪ್ರಧಾನ ಕಾರ್ಯದರ್ಶಿ ಶ್ರೀ ಹರಿ ಕುಕ್ಕುಡೇಲು, ಕೋಶಾಧಿಕಾರಿ ತೀರ್ಥೇಶ್ ಬಲಂದೋಟಿ, ಸಂಚಾಲಕರಾದ ಜಯರಾಮ ಗೌಡರಮನೆ, ಆಡಳಿತ ಸಮಿತಿಯ ಕಾರ್ಯದರ್ಶಿ ಪ್ರವೀಣ್ಕುಮಾರ್ ಬಾಳೆಕೋಡಿ, ಕೋಶಾಧಿಕಾರಿ ಮೇದಪ್ಪ ಗೌಡ ಪೇರಾಲುಮೂಲೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿಗಳಾದ ಮಂಜುನಾಥ ಪಿ.ಪೇರಾಲು, ದಾಮೋದರ ಮಿತ್ತಪೇರಾಲು, ರಾಜಣ್ಣ ಪೇರಾಲುಮೂಲೆ, ದಿನೇಶ್ ಗಬ್ಬಲಡ್ಕ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.