ಸುಳ್ಯ:ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವ ಸುಳ್ಯ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು. ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳು ನಡೆಯಿತು. ಸಮಾರೋಪ ಸಮಾರಂಭದಲ್ಲಿ
ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ, ಉದ್ಯಮಿಗಳಾದ ಪೊಸವಳಿಕೆ ಗೋಪಾಲಕೃಷ್ಣ ನಾಯಕ್, ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜ ಸುಳ್ಯ ಇದರ ಅಧ್ಯಕ್ಷ ಹೇಮಂತ್ ಕುಮಾರ್ ಕಂದಡ್ಕ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೇರ್ಪಳ ಇದರ ಅಧ್ಯಕ್ಷ ಶ್ರೀ ದೇವದಾಸ್ ಪ್ರಭು, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಸುಳ್ಯ ಇದರ ಅಧ್ಯಕ್ಷೆ ಅನಿತಾ ಕಾಯರ್ತೋಡಿ ಭಾಗವಹಿಸಿದ್ದರು. ಶಾಸಕರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು. 2022-23ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಸುಳ್ಯ ತಾಲೂಕಿನ ಸಮಾಜದ ತಲಾ ಇಬ್ಬರು ವಿದ್ಯಾರ್ಥಿಗಳನ್ಬು ಸನ್ಮಾನಿಸಲಾಯಿತು.