ಬಾಳಿಲ:ಬಾಳಿಲ ವಿದ್ಯಾ ಬೋಧಿನಿ ಪ್ರೌಢಶಾಲೆಯಲ್ಲಿ ಕೆವಿಜಿ ಸಾಧನೆ ಮತ್ತು ಸಂಸ್ಮರಣೆ ಕಾರ್ಯಕ್ರಮ ಜರುಗಿತು. ಸುಳ್ಯದ ಅಮರಶಿಲ್ಪಿ ಡಾ. ಕುರುಂಜಿ ವೆಂಕಟರಮಣ ಗೌಡರ 95ನೇ ಜಯಂತಿ ಉತ್ಸವದ ಅಂಗವಾಗಿ ಕೆವಿಜಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ನಿವೃತ ಪ್ರಾಂಶುಪಾಲರಾದ ಡಾ . ಪ್ರಭಾಕರ ಶಿಶಿಲ ಭಾಗವಹಿಸಿ ಕುರುಂಜಿಯವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ
ಅಧ್ಯಕ್ಷತೆಯನ್ನು ವಿದ್ಯಾ ಬೋಧಿ ನಿ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ರಾಧಾಕೃಷ್ಣರಾವ್. ಯು ವಹಿಸಿದರು.ಸಂಸ್ಥೆಯ ಮುಖ್ಯೋಪಾಧ್ಯಯರಾದ ಯಶೋಧರ ನಾರಾಲು ಸ್ವಾಗತಿಸಿದರು. ಗಣಿತ ಶಿಕ್ಷಕರಾದ ಉದಯಕುಮಾರ್ ರೈ ವಂದಿಸಿದರು ಸಹಶಿಕ್ಷಕ ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಕೆವಿಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕೆವಿಜಿ ಅವರ ಸಂಸ್ಕರಣೆ ಸಂಬಂಧವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಾದ ಕ್ಷಮಾ ಮತ್ತು ಚಿಂತನ ಇವರಿಗೆ ಬಹುಮಾನ ವಿತರಿಸಲಾಯಿತು. ಕೆವಿಜಿ ಅವರ ಸಂಸ್ಮರಣೆಯ ಸ್ಮರಣಾರ್ಥ ಸಂಸ್ಥೆಗೆ ಕೊಡ ಮಾಡಿದ ಪುಸ್ತಕಗಳನ್ನು ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳು ವಿತರಿಸಿದರು. ಸಂಸ್ಥೆಯ ಅಧ್ಯಕ್ಷರು ಮತ್ತು ಮುಖ್ಯ ಶಿಕ್ಷಕರು ಸ್ವೀಕರಿಸಿದರು.












