ಬೆಳ್ಳಾರೆ: ಬೆಳ್ಳಾರೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾಬೋಧಿನೀ ಪ್ರೌಢಶಾಲೆಯು 14 ರ ವಯೋಮಿತಿಯ ಬಾಲಕರ ತಂಡ ಪ್ರಶಸ್ತಿ, ಬಾಲಕಿಯರ ದ್ವಿತೀಯ ತಂಡ ಪ್ರಶಸ್ತಿ, ಬಾಲಕ ಬಾಲಕಿಯರ ಸಮಗ್ರ ಪ್ರಶಸ್ತಿ, 17 ರ ವಯೋಮಿತಿಯ ಬಾಲಕಿಯರ ತಂಡ ಪ್ರಶಸ್ತಿ, ಬಾಲಕರ ದ್ವಿತೀಯ ತಂಡ ಪ್ರಶಸ್ತಿ ಹಾಗೂ
ಬಾಲಕ ಬಾಲಕಿಯರ ಸಮಗ್ರ ಪ್ರಶಸ್ತಿ ಗಳಿಸಿದೆ. ವಿದ್ಯಾಬೋಧಿನೀ ಪ್ರೌಢಶಾಲಾ ವಿದ್ಯಾರ್ಥಿನಿ ಅನುಶ್ರೀ 100 ಮೀ, 200 ಮೀ ಹಾಗೂ ಉದ್ದಜಿಗಿತದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಬಾಲಕಿಯರ ವಿಭಾಗದಲ್ಲಿ ತಾಲೂಕಿನ ವೈಯುಕ್ತಿಕ ಕ್ರೀಡಾ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾಳೆ. ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಒಟ್ಟಾರೆಯಾಗಿ 19 ಚಿನ್ನ, 7 ಬೆಳ್ಳಿ, 13 ಕಂಚಿನ ಪದಕ ಗಳಿಸಿದರು. ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ರಿಹಾನ 100 ಮೀ. ಪ್ರಥಮ, ಹಾಗೂ ಫಾತಿಮತ್ ಶಬೀಬಾ 80 ಮೀ ಅಡೆತಡೆ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆಯನ್ನು ಗಳಿಸಿರುತ್ತಾರೆ. ಇದೇ ನವಂಬರ್ 15, 16 ರಂದು ಮಂಗಳೂರಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಜರುಗಲಿದೆ.