ಸುಳ್ಯ:ದ.ಕ. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಮಂಗಳೂರು,ಕ್ಷೇತ್ರ ಶಿಕ್ಷಣಾಧಿಕಾರಿ ಶಾಲಾ ಶಿಕ್ಷಣ ಇಲಾಖೆ ಬಂಟ್ವಾಳ ಮತ್ತು ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಪ್ರೌಢ
ಶಾಲಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ತಂಡ 17ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದೆ. 10ನೇ ತರಗತಿಯ ರಚಿತಾ ಎಂ ಪಿ, ಹಸ್ತಾ ಕೆ, ಶ್ರೀಹಸ್ತಾ ಕೆ ಎಸ್, ದೀಪ್ತಿ ಪಿ ಹಾಗೂ ವರ್ಷಿತಾ ಜಿ ಚಾಮರಾಜನಗರದಲ್ಲಿ ನಡೆಯುವ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ರಚಿತಾ ಎಂ.ಪಿ. ಅತ್ಯುತ್ತಮ ಆಟಗಾರ್ತಿಯಾಗಿ ಹೊರಹೊಮ್ಮಿದ್ದಾಳೆ. ಮಿಥುನ್ ಕೆ ದೈಹಿಕ ಶಿಕ್ಷಣ ಶಿಕ್ಷಕರು, ತೇಜಸ್ವಿ ಕಡಪಳ , ಧನ್ಯರಾಜ್ ಮೂಕಮಲೆ, ಹರಿಪ್ರಸಾದ ಕೆ ತರಬೇತಿ ನೀಡಿದ್ದರು.