ಸುಳ್ಯ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ . ನೆಹರು ಮೆಮೋರಿಯಲ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಮಾಣಿಬೆಟ್ಟು ಪಂದ್ಯಾಟವನ್ನು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ
ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಲತಾ ಎಂ ರೈ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯಶಂಕರ ಹೆಚ್ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ಬಹುಮಾನ ವಿತರಕರಾಗಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿಯ ನಿವೃತ್ತ ದೈಹಿಕ ಶಿಕ್ಷಕರಾದ ಚಂದ್ರಶೇಖರ್ ಎಂ ಭಾಗವಹಿಸಿದರು. ವೇದಿಕೆಯಲ್ಲಿ
ಸುಳ್ಯ ತಾಲೂಕು ಧ್ವನಿವರ್ಧಕ ಮತ್ತು ಬೆಳಕು ಇದರ ಸಂಘದ ಕಾರ್ಯದರ್ಶಿ ಜಯಪ್ರಕಾಶ್ ಕೆ, ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಂದ್ಯಾಟದ ವೀಕ್ಷಕರಾಗಿ ಆಗಮಿಸಿದ ಬೆಳ್ಳಾರೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕರಾದ ರಾಮಚಂದ್ರ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಉಪನ್ಯಾಸಕ ಶಿವಾನಂದ್ ಸ್ವಾಗತಿಸಿ, ನಿರ್ವಹಣಾ ವಿಭಾಗದ ಉಪನ್ಯಾಸಕಿ ಗೀತಾ ವಂದಿಸಿದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಸುರೇಖಾ ಹೆಚ್ ಬಹುಮಾನಗಳ ಪಟ್ಟಿ ವಾಚಿಸಿದರು. ಹಿಂದಿ ಉಪನ್ಯಾಸಕ ರಾಮಕೃಷ್ಣ ಕರ್ಯಕ್ರಮ ನಿರೂಪಿಸಿದರು.
ಒಟ್ಟು 11 ತಂಡಗಳು ಭಾಗವಹಿಸಿದ್ದವು.
ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡ ಚಾಂಪಿಯನ್ ಆಯಿತು. ಸೇಕ್ರೇಡ್ ಹಾರ್ಟ್ ಕಾಲೇಜು ಮಡಂತ್ಯಾರು ದ್ವಿತೀಯ ಸ್ಥಾನಿಯಾಯಯಿತು.