ಧರ್ಮಸ್ಥಳ: ಕಾಸರಗೋಡು ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರು ಫಲಮಂತ್ರಾಕ್ಷತೆಯೊಂದಿಗೆ ಪ್ರಸಾದ ನೀಡಿ ಶುಭ ಹಾರೈಸಿದರು.ಬಳಿಕ ದೇವರ ದರ್ಶನ ಮಾಡಿ ವಿಶೇಷ
ಪೂಜೆ ಸಲ್ಲಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 25ನೇ ವರ್ಷದ ಭಜನಾ ಕಮ್ಮಟಕ್ಕೆ ಆಗಮಿಸಿ ಶುಭ ಹಾರೈಸಿದರು. ತರಬೇತಿಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಭಜನೆಯು

ವಿಭಜಿಸುವುದಿಲ್ಲ. ಬದಲಾಗಿ ಒಗ್ಗೂಡಿಸುತ್ತದೆ. ದೇವರನ್ನು ಭೇಟಿ ಮಾಡಲು ಸುಲಭದ ಮಾರ್ಗ ಭಜನೆಯಾಗಿದೆ ಎಂದು ಹೇಳಿದರು. ಎಲ್ಲರನ್ನು ಒಗ್ಗೂಡಿಸುವ ಪ್ರಯತ್ನ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಗುತ್ತಿದೆ. ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಧಾರ್ಮಿಕ ಸಂಘಟನೆ, ಸಾಮಾಜಿಕ, ಶೈಕ್ಷಣಿಕ ಸಂಸ್ಥೆಗಳ ಮೂಲಕ ಎಲ್ಲರ ಅಭಿವೃದ್ಢಿಗೆ ಕೈ ಜೋಡಿಸುತ್ತಿದೆ ಎಂದು ಶುಭ ಹಾರೈಸಿದರು. ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ, ಉಜಿರೆ ಅಶೋಕ್ ಭಟ್ ಉಪಸ್ಥಿತರಿದ್ದರು. ಭಜನಾ ಕನ್ನಡದಲ್ಲಿ ಸಾಂಸ್ಕೃತಿಕ ಸಂಭ್ರಮ ನಡೆಯುತು