ಧರ್ಮಸ್ಥಳ: ಒಳ್ಳೆಯ ಮನಸ್ಸು ಮತ್ತು ಒಳ್ಳೆ ಕೆಲಸದೊಂದಿಗೆ ನಾವು ಆಡುವ ಮಾತು ಹಿತಮಿತವಾಗಿರಬೇಕು. ಮಾತು ಆಡುವವರಿಗೂ ಕೇಳುವವರಿಗೂ ಶಾಂತಿ, ಸಮಾಧಾನ ನೀಡಬೇಕು. ಮಾತೆ ಮಾಣಿಕ್ಯ, ಮಾತಿನ ಅಲಂಕಾರವೇ ಸರ್ವ ಶ್ರೇಷ್ಠವಾಗಿದೆ ಎಂದು ಮಂಡ್ಯ ಜಿಲ್ಲೆಯ ಆರತಿಪುರ ಜೈನಮಠದ ಪೂಜ್ಯ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಸ್ವಾಮೀಜಿ ಹೇಳಿದರು.ಅವರು ಗುರುವಾರ ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ
ತರಬೇತಿ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಶಿಬಿರಾರ್ಥಿಗಳು ನಿರಂತರ ಅಧ್ಯಯನ ಮತ್ತು ಅಭ್ಯಾಸದಿಂದ ತರಬೇತಿಯಲ್ಲಿ ಪಡೆದ ಅನುಭವವನ್ನು ಸದುಪಯೋಗ ಪಡಿಸಿ ಸಾತ್ವಿಕ ಜೀವನ ನಡೆಸಬೇಕು. ಭಜನೆ ಮೂಲಕ ಭಗವಂತನಿಗೆ ಭಕ್ತಿಯ ಸುಮಗಳನ್ನು ಅರ್ಪಿಸಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.ಹೇಮಾವತಿ ವಿ. ಹೆಗ್ಗಡೆ,
ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿದರು.
ಭಜನಾ ಕಮ್ಮಟದ ಕಾರ್ಯದರ್ಶಿ ಸುರೇಶ್ ಮೊಯಿಲಿ ವರದಿ ಸಾದರಪಡಿಸಿದರು.ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯಪ್ರಸಾದ್ ಸ್ವಾಗತಿಸಿದರು. ಪುರುಷೋತ್ತಮ ಪಿ.ಕೆ. ಧನ್ಯವಾದವಿತ್ತರು. ಯೋಜನಾಧಿಕಾರಿ ಶ್ರೀನಿವಾಸ್ ಕಾರ್ಯಕ್ರಮ ನಿರ್ವಹಿಸಿದರು.