ಸುಬ್ರಹ್ಮ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್, ಶ್ರೀ ಬಸವೇಶ್ವರ ದೇವಸ್ಥಾನ ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ
ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಸುಬ್ರಹ್ಮಣ್ಯ ವಲಯ ಭಜನಾ ಪರಿಷತ್ನ ಅಧ್ಯಕ್ಷ ಚಂದ್ರಶೇಖರ ಕೊಂದಳ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ನ ಸುಳ್ಯ ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ, ತಾಲೂಕು ಭಜನೋತ್ಸವ ಸಮಿತಿಯ ಅಧ್ಯಕ್ಷ ರವಿ ಕಕ್ಕೆಪದವು, ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷೆ ವಿಮಲಾ ರಂಗಯ್ಯ, ಶ್ರೀ ಬಸವೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗಿರಿಧರ ಸ್ಕಂದ ಮಾತನಾಡಿದರು.
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ತಾಲೂಕು ಅಧ್ಯಕ್ಷ ಸೋಮಶೇಖರ ಪೈಕ, ತಾಲೂಕು ಭಜನೋತ್ಸವ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ ಬಸವನಮೂಲೆ ಕುಲ್ಕುಂದ, ಕುಲ್ಕುಂದ ಒಕ್ಕೂಟದ ಅಧ್ಯಕ್ಷ ಹರಿಪ್ರಸಾದ್, ಕಲ್ಲಾಜೆ ಒಕ್ಕೂಟದ ಅಧ್ಯಕ್ಷ ಮೋನಪ್ಪ ಗೌಡ, ಸುಬ್ರಹ್ಮಣ್ಯ ಒಕ್ಕೂಟದ ಉಪಾಧ್ಯಕ್ಷೆ ರತ್ನಾವತಿ, ಭಜನಾ ತರಬೇತಿದಾರರಾದ ನಳಿನಾಕ್ಷಿ ವಿ ಆಚಾರ್ಯ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ ಸ್ವಾಗತಿಸಿ, ಕೊಲ್ಲಮೊಗ್ರ ಬಿ ಒಕ್ಕೂಟದ ಅಧ್ಯಕ್ಷ ಹೇಮಂತ್ ಸಿ ದೋಲ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯ ವಲಯ ಭಜನಾ ಪರಿಷತ್ ನಿರ್ದೇಶಕರಾದ ಸತೀಶ್ ಟಿ ಎನ್ ವಂದಿಸಿದರು.













