ಬೆಂಗಳೂರು:ಬೆಂಗಳೂರು- ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾ ನಡುವೆ ವೇಗದ ಹಾಗೂ ಆಧುನಿಕ ರೈಲು ಸಂಪರ್ಕ ಕಲ್ಪಿಸಲಿರುವ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಬೆಂಗಳೂರಿನ ಐಐಎಂಬಿ ಆಡಿಟೋರಿಯಂನಿಂದ
ವರ್ಚ್ಯುಯಲ್ ಮೂಲಕ ಚಾಲನೆ ನೀಡಿದ್ದಾರೆ.ಹಾಸನ, ಸಕಲೇಶಪುರ, ಮಂಗಳೂರು, ಉಡುಪಿ, ಮುರುಡೇಶ್ವರ, ಗೋಕರ್ಣ ಮತ್ತು ಕಾರವಾರ ಸೇರಿದಂತೆ ಪ್ರಮುಖ ಸ್ಥಳಗಳನ್ನು ಸಂಪರ್ಕಿಸಿ ಅಂತಿಮವಾಗಿ ಗೋವಾದ ಮಡಗಾಂವ್ ತಲುಪಲಿದೆ. ಮಡಗಾಂವ್- ಬೆಂಗಳೂರು ವಂದೇ ಭಾರತ್

ರೈಲಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಲ್ಲಿನ ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಶುಕ್ರವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅಶ್ವಿನಿ ವೈಷ್ಣವ್, ‘ಎಲ್ಲ ರೀತಿಯ ಸವಾಲುಗಳ ನಡುವೆ ಈ ವಂದೇ ಮಾತರಂ ರೈಲು ಪ್ರಯಾಣ ಸಾಕಾರವಾಗಿದೆ’ ಎಂದರು.ಬಳಿಕ ವಂದೇ ಭಾರತ್ ರೈಲಿನಲ್ಲಿ ಅವರು ಪ್ರಯಾಣಿಸಿದರು.
ಶಾಸಕರಾದ ವೇದವ್ಯಾಸ ಕಾಮತ್, ಭಾಗಿರಥಿ ಮುರುಳ್ಯ, ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಉಳಿಪಾಡಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮತ್ತಿತರರು ಭಾಗವಹಿಸಿದ್ದರು.














