ಮಂಗಳೂರು:ಬೆಂಗಳೂರು– ಮಂಗಳೂರು– ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ನ. 13ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಐಐಎಂ ಸಭಾಂಗಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಲಿದ್ದಾರೆ. ಜೊತೆಗೆ ವಿವಿಧ ರೈಲ್ವೆ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ
ಉದ್ಘಾಟನೆಗೊಳ್ಳಲಿರುವ ಪ್ರಮುಖ ರೈಲ್ವೆ ಯೋಜನೆಗಳಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನಾಲ್ಕು ರೈಲು ನಿಲ್ದಾಣಗಳಾದ ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಚಿಕ್ಕಮಗಳೂರು ಮತ್ತು ಚಾಮರಾಜನಗರ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿ ಸೇರಿವೆ.ಇದೇ ಸಂದರ್ಭದಲ್ಲಿ, ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.ನ. 13ರಂದು ಮಧ್ಯಾಹ್ನ 12ಗಂಟೆಗೆ ಕರ್ನಾಟಕದ ವಿವಿಧ ರೈಲು ನಿಲ್ದಾಣಗಳಲ್ಲಿ ಏಕಕಾಲದಲ್ಲಿ
ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಂಗಳೂರು ಜಂಕ್ಷನ್ನಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಕೈಗೊಂಡಿರುವ ಪುನರಾಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಗುವುದು ಚಾಮರಾಜನಗರ ಮತ್ತು ಚಿಕ್ಕಮಗಳೂರು ನಿಲ್ದಾಣಗಳಲ್ಲಿ ಪುನರಾಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಗುವುದು. ಕಬಕ ಪುತ್ತೂರು ಮತ್ತು ಹಾಸನ ರೈಲು ನಿಲ್ದಾಣಗಳಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಮಾರ್ಗಮಧ್ಯೆ ಹಸಿರು ನಿಶಾನೆ ತೋರಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
































