ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ರೀಡಾಂಗಣದ ಬಳಿ ನೂಕು ನುಗ್ಗಲು ಉಂಟಾಗಿದ್ದರಿಂದ ಈ ವೇಳೆ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿದೆ.
ಕಾಲ್ತುಳಿತದಲ್ಲಿ
20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಆರ್ಸಿಬಿ ವಿಜಯೋತ್ಸವ ಪರೇಡ್ ಭದ್ರತಾ ದೃಷ್ಟಿಯಿಂದ ಕೈಬಿಡಲಾಗಿತ್ತು. ಬದಲಾಗಿ ಚಿನ್ನಸ್ವಾಮಿಯಂ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಿಸಲು ಅನುಮತಿ ನೀಡಲಾಗಿತ್ತು. ವಿಧಾನಸೌಧದ ಬಳಿ ತಂಡದ ಸದಸ್ಯರಿಗೆ ಸನ್ಮಾನಿಸಿ, ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಸಾವಿರಾರು ಅಭಿಮಾನಿಗಳು ಸ್ಟೇಡಿಯಂನತ್ತ ಬಂದ ಕಾರಣ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುವಂತಾಗಿತ್ತು.
ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.