ಬೆಂಗಳೂರು:ಪಾಕಿಸ್ತಾನ–ನ್ಯೂಜಿಲೆಂಡ್ ಮಧ್ಯೆ ‘ಮಾಡು–ಮಡಿ’ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಸತತ ನಾಲ್ಕು ಗೆಲುವುಗಳ ಬಳಿಕ ಎದುರಾದ ‘ಹ್ಯಾಟ್ರಿಕ್’ ಸೋಲಿನಿಂದ ಕಂಗೆಟ್ಟಿರುವ ನ್ಯೂಜಿಲೆಂಡ್ ತಂಡ ಒಂದೆಡೆಯಾದರೆ, ಏಳು ಪಂದ್ಯಗಳಿಂದ ಕೇವಲ ಆರು ಪಾಯಿಂಟ್ಸ್ ಸಂಗ್ರಹಿಸಿರುವ ಪಾಕಿಸ್ತಾನ ತಂಡ ಮತ್ತೊಂದೆಡೆ.ಎರಡೂ ತಂಡಗಳಿಗೆ
ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ. ಸೆಮಿಫೈನಲ್ ಪ್ರವೇಶದ ಸಾಧ್ಯತೆ ಜೀವಂತವಾಗಿರಿಸಿಕೊಳ್ಳಲು ಉಭಯ ತಂಡಗಳಿಗೂ ಜಯ ಅನಿವಾರ್ಯ ಕಿವೀಸ್ ತಂಡ ತಾನಾಡಿದ ಮೊದಲ ನಾಲ್ಕು ಪಂದ್ಯಗಳನ್ನು ಗೆದ್ದಾರೂ ಭಾರತ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಕೈಯಲ್ಲಿ ಎದುರಾದ ಸೋಲುಗಳು ಈ ತಂಡದ ಸೆಮಿ ಪ್ರವೇಶದ ಹಾದಿಯನ್ನು ದುರ್ಗಮಗೊಳಿಸಿದೆ. ಇನ್ನುಳಿದ ಎರಡೂ ಲೀಗ್ ಪಂದ್ಯಗಳನ್ನು
ಗೆಲ್ಲಲೇಬೇಕಾದ ಒತ್ತಡಕ್ಕೆ ತಂಡ ಸಿಲುಕಿದೆ. ಪಾಕಿಸ್ತಾನ ತಂಡವೂ ತೀವ್ರ ಒತ್ತಡದಲ್ಲಿದೆ ಸತತ ನಾಲ್ಕು ಸೋಲುಗಳ ಬಳಿಕ ತಂಡವು ಹಿಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು ಜಯಿಸಿತ್ತು. ಸೆಮಿ ಸಾಧ್ತತೆ ಜೀವಂತವಾಗಿರಿಸಲು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ.
ತಂಡಗಳು
ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ವಿಲ್ ಯಂಗ್ , ಕೈಲ್ ಜಾಮಿಸನ್.
ಪಾಕಿಸ್ತಾನ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮುಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಆಗಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಮೊಹಮ್ಮದ್ ಅಫ್ರಿದಿ, ಮೊಹಮ್ಮದ್ ವಾಸಿಂ.
ಪಂದ್ಯ ಆರಂಭ: ಬೆಳಿಗ್ಗೆ 10.30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್









