ರಾವಲ್ಪಿಂಡಿ:ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ಆರು ವಿಕೆಟ್ಗಳಿಂದ ಗೆಲುವು ಸಾಧಿಸಿದ್ದು, 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕೈವಶಪಡಿಸಿಕೊಂಡಿದೆ.ಪಾಕಿಸ್ತಾನ ತಂಡವನ್ನು ಅದರ ನೆಲದಲ್ಲಿಯೇ ಮಣಿಸಿದ ಬಾಂಗ್ಲಾ ಪಾಕ್ ವಿರುದ್ಧ ಜಯಿಸಿದ ಎರಡನೇ ಟೆಸ್ಟ್ ಪಂದ್ಯ ಇದಾಗಿದೆ. ಉಭಯ ತಂಡಗಳು
ಇದುವರೆಗೆ 16 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಅದರಲ್ಲಿ 12 ಪಂದ್ಯಗಳನ್ನು ಪಾಕ್ ಜಯಿಸಿದ್ದರೆ, ಬಾಂಗ್ಲಾ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ ಒಂದು ಪಂದ್ಯ ಡ್ರಾ ಆಗಿದ್ದರೆ, ಮತ್ತೊಂದು ಪಂದ್ಯ ರದ್ದಾಗಿತ್ತು.
2ನೇ ಪಂದ್ಯದಲ್ಲಿ ಪಾಕ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಪಾಕ್ ಮೊದಲ ಇನಿಂಗ್ಸ್ನಲ್ಲಿ 274 ರನ್ ಗಳಿಸಿ ಆಲೌಟ್ ಆಗಿತ್ತು. ಅದಕ್ಕುತ್ತರವಾಗಿ ಬಾಂಗ್ಲಾದೇಶ ಮೊದಲ ಇನಿಂಗ್ಸ್ನಲ್ಲಿ 262 ರನ್ ಪೇರಿಸಿತ್ತು. 12 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಪಾಕ್, 46 ಓವರ್ಗಳಲ್ಲಿ 172 ರನ್ ಗಳಿಸಿ ಆಲೌಟ್ ಆಗಿತ್ತು. ಅದಕ್ಕುತ್ತರವಾಗಿ ಬಾಂಗ್ಲಾ 56 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಬಾಂಗ್ಲಾದೇಶ 10 ವಿಕೆಟ್ಗಳಿಂದ ಮಣಿಸಿತ್ತು.