ಬೆಳ್ಳಾರೆ:ಬೆಳ್ಳಾರೆ ಬಂಗ್ಲೆಗುಡ್ಡೆಯಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ 79ನೆಯ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್ ರೈ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ , ಆರ್ ಕೆ ಭಟ್ ಕುರುಂಬುಡೇಲ್, ಅಮರ ಸುಳ್ಯ ಸಮರ ಸುಳ್ಯ ತಾಲೂಕು ಘಟಕದ
ಅಧ್ಯಕ್ಷ ಚಂದ್ರ ಕೊಲ್ಚಾರ್, ಅನಿಂದಿತ್ ಕೊಚ್ಚಿ ಬಾರಿಕೆ ಮಾತನಾಡಿದರು. ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಪದಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಹಾಗೂ ಸಿಬ್ಬಂದಿ ವರ್ಗ, ಕೆಪಿಎಸ್ ಸ್ಕೂಲ್ ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ಅಕ್ಷಯ ಯುವಕ ಮಂಡಲದ ಪದಾಧಿಕಾರಿಗಳು, ಕೃಷಿ ಪತ್ತಿನ ಸಹಕಾರಿ ಸಂಘ ಬೆಳ್ಳಾರೆಯ ನಿರ್ದೇಶಕರು, ಲಕ್ಷ್ಮೀ ಸಂಜೀವಿನಿ ಘಟಕದ ಪದಾಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ವೀಣಾ ಮೂಡಾಯಿತೋಟ ಹಾಗೂ ಇತರ ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಅದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಕೆಪಿಸ್ ಶಾಲಾ ಮಕ್ಕಳು ಭಾಗವಹಿಸಿ ರಾಷ್ಟದ್ವಜಕ್ಕೆ ಗೌರವ ನಮನ ಸಲ್ಲಿಸಿದರು. ಗ್ರಾ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮ ನಿರೂಪಿಸಿದರು.





