ಸುಳ್ಯ:ಸುಳ್ಯದ ಖಾಸಗಿ ಬಸ್ ನಿಲ್ದಾಣದ ಸಮೀಪ ರಿಕ್ಷಾ ಸ್ಟ್ಯಾಂಡ್ ನವರು ಮುಖ್ಯ ರಸ್ತೆಯ ಬದಿ ಹಾಕಲಾಗಿದ್ದ ಸುಳ್ಯ ಜಾತ್ರೋತ್ಸವ ಹಾಗೂ ಅಯೋಧ್ಯೆ ಶ್ರೀರಾಮ ಮಂದಿರದ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಶುಭಕೋರಿ ಅಳವಡಿಸಲಾಗಿದ್ದ ಬ್ಯಾನರ್ನ್ನು ಹರಿದು ಹಾನಿ ಮಾಡಿದ
ಘಟನೆ ನಡೆದಿದೆ. ಬ್ಯಾನರ್ ಅಳವಡಿಸಿದ ಚಾಲಕರು ಹಾಗೂ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು ಬ್ಯಾನರ್ ಹರಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಕೆಲವು ದಿನಗಳ ಹಿಂದೆ ಬ್ಯಾನರ್ ಅಳವಡಿಸಲಾಗಿದ್ದು ನಿನ್ನೆ ರಾತ್ರಿ ಬ್ಯಾನರ್ ಹರಿದು ಹಾನಿ ಮಾಡಲಾಗಿದೆ ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಪೋಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಬ್ಯಾನರ್ ಹರಿದಿರುವ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಹಿಂದು ಸಂಘಟನೆಯ ಪ್ರಮುಖರು ಒತ್ತಾಯಿಸಿದ್ದಾರೆ.









