ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ಚುನಾವಣಾ ಪ್ರಚಾರ ಕಾರ್ಯ ನಡೆಯಿತು.ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ಪ್ರಮುಖರು ಅಲ್ಲಿಪಾದೆ, ನಾವೂರು, ಅಮ್ಟಾಡಿ, ಮೂಲರಪಟ್ಣ, ಕರ್ಪೆ ಶ್ರೀ ರಾಮಾಂಜನೇಯ ಭಜನಾ ಮಂದಿರ, ಸಿದ್ಧಕಟ್ಟೆ, ರಾಯಿ, ಪಂಜಿಕಲ್ಲು, ಕುಕ್ಕಿಪ್ಪಾಡಿ, ಬಸ್ತಿಕೋಡಿ, ಇರ್ವತ್ತೂರುಪದವು, ಕಾವಲ್ ಕಟ್ಟೆ, ವಗ್ಗ ಮೊದಲಾದ
ಪ್ರದೇಶಗಳ ಮತದಾರ, ಕಾರ್ಯಕರ್ತರ ಬಳಿಗೆ ತೆರಳಿ ಮಾತನಾಡಿದರು.
ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ದ್ವೇಷದ ರಾಜಕಾರಣ ನಾವೆಂದೂ ಮಾಡಿಲ್ಲ. ಅದರ ಅಗತ್ಯವೂ ನಮಗಿಲ್ಲ. ಕಾಂಗ್ರೆಸ್ ಸರಕಾರದ ಸಾಧನೆ ಹಾಗೂ ನಾವು ಅಭಿವೃದ್ಧಿ ದೃಷ್ಟಿಯಿಂದ ಹಾಕಿಕೊಂಡಿರುವ ಯೋಜನೆಗಳನ್ನು ಜನರಿಗೆ ತಿಳಿಸಿ. ಖಂಡಿತವಾಗಿಯೂ ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಸಾಮರಸ್ಯದ ಗತವೈಭವ ಮರಳಿ ಬರಲಿದೆ ಎಂದರು.
ಮಾಜಿ ಸಚಿವ ಬಿ. ರಮಾನಾಥ ರೈ, ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸುಧೀಪ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಪ್ರಚಾರ ಸಮಿತಿಯ ಪಿಯೂಷ್ ರೋಡ್ರಿಗಸ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಲವೀನಾ ಮೋರಸ್, ಪಾಣೆಮಂಗಳೂರು ವಲಯ ಅಧ್ಯಕ್ಷೆ ಜಯಂತಿ ಪೂಜಾರಿ, ಸುದರ್ಶನ್ ಜೈನ್, ಬಂಟ್ವಾಳ ಬ್ಲಾಕ್ ಪ್ರಚಾರ ಸಮಿತಿಯ ಜಗದೀಶ್ ಕೊಯಿಲ ಮತ್ತಿತರರು ಉಪಸ್ಥಿತರಿದ್ದರು.