ಥೌಬಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ್ ಜೋಡೊ ನ್ಯಾಯ ಯಾತ್ರೆ’ ಭಾನುವಾರ ಮಣಿಪುರದ ಥೌಬಲ್ನಿಂದ ಪ್ರಾರಂಭವಾಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಾತ್ರೆಗೆ ಚಾಲನೆ ನೀಡಿದರು.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರು ಉಪಸ್ಥಿತರಿದ್ದರು. .ಯಾತ್ರೆ ಬಗ್ಗೆ ಮಾತನಾಡಿದ
ರಾಹುಲ್ ಗಾಂಧಿ, ‘ಪೂರ್ತಿ ಯಾತ್ರೆ ಕಾಲ್ನಡಿಗೆಯ ಮೂಲಕ ಸಾಗಬೇಕಿತ್ತು. ಆದರೆ ಲೋಕಸಭೆ ಚುನಾವಣೆ ಇರುವ ಕಾರಣ ಯಾತ್ರೆಯನ್ನು ಬೇಗ ಮುಗಿಸಬೇಕಿದೆ. ಹೀಗಾಗಿ ಯಾತ್ರೆಯು ಹೈಬ್ರಿಡ್ ಮಾದರಿಯಲ್ಲಿ ಇರಲಿದ್ದು ಬಸ್ ಸಂಚಾರ ಮತ್ತು ಪಾದಯಾತ್ರೆ ಎರಡನ್ನೂ ಒಳಗೊಂಡಿರಲಿದೆ’ ಎಂದರು. ಭಾರತ ಜೋಡೊ ನ್ಯಾಯ ಯಾತ್ರೆಯು ಮಾರ್ಚ್ 20ರಂದು ಮುಂಬೈನಲ್ಲಿ ಮುಕ್ತಾಯವಾಗಲಿದೆ. 67 ದಿನಗಳ ಈ ಯಾತ್ರೆಯು 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಸಾಗಿ ಒಟ್ಟು 6,713 ಕಿ.ಮೀ. ಕ್ರಮಿಸಲಿದೆ.ಯಾತ್ರೆಯು ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸಗಢ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಸಂಚರಿಸಲಿದೆ ಎಂದರು.









