ನವದೆಹಲಿ: ಐಸಿಸಿ ಕ್ರಿಕೆಟ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ನಗದು ಬಹುಮಾನ ಘೋಷಿಸಿದೆ.
ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ನ್ಯೂಜಿಲೆಂಡ್ ತಂಡವನ್ನು
ನಾಲ್ಕು ವಿಕೆಟ್ಗಳಿಂದ ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು.
ಘೋಷಿಸಲಾಗಿರುವ ನಗದು ಬಹುಮಾನದಲ್ಲಿ ಆಟಗಾರರು, ತರಬೇತಿ ಹಾಗೂ ಬೆಂಬಲ ಸಿಬ್ಬಂದಿ, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಸದಸ್ಯರಿಗೆ ಪಾಲಿರಲಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.