ಸುಳ್ಯ:ಸುಳ್ಯದ ಬೀರಮಂಗಲದಲ್ಲಿ ನಾಗರೋತ್ಥಾನ ಯೋಜನೆಯಡಿ ನಿರ್ಮಾಣವಾಗಿರುವ ಉದ್ಯಾನವನಕ್ಕೆ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಎ. ಸಿ ಯವರನ್ನು ಭೇಟಿಯಾಗಿ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣ ಮಾಡುವಂತೆ
ಮನವಿ ಸಲ್ಲಿಸಿದರು. ಉದ್ಯಾನವನಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿದ ಅವರು ಈ ಬಗ್ಗೆ ನಗರ ಪಂಚಾಯತ್ ಸಭೆಯಲ್ಲಿ ನಿರ್ಣಯ ಕೈಗೊಂಡು ಪ್ರತಿಮೆ ನಿರ್ಮಾಣಕ್ಕೆ ಕ್ರಮ ಕೈಗೆತ್ತಿಕೊಳ್ಳುವಂತೆ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಮತ್ತು ಸದಸ್ಯರು ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ್, ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಠ್, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಸದಸ್ಯರಾದ ವಿನಯಕುಮಾರ್ ಕಂದಡ್ಕ, ಕೆ.ಎಸ್.ಉಮ್ಮರ್, ಶರೀಫ್ ಕಂಠಿ, ಧೀರಾ ಕ್ರಾಸ್ತಾ, ಸುಧಾಕರ, ಶಿಲ್ಪಾ ಸುದೇವ್, ಶೀಲಾ ಅರುಣ ಕುರುಂಜಿ
ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ಬೊಳ್ಳೂರು, ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳಾದ ಕೆ ಗೋಕುಲ್ ದಾಸ್ ಸುಳ್ಯ, ಭವಾನಿಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆ, ರಾಮಕೃಷ್ಣ ಬೀರಮಂಗಲ ಮತ್ತಿತರರು ಉಪಸ್ಥಿತರಿದ್ದರು.