ಬಂದಡ್ಕ:ಪ್ರವಾಸಿ ತಾಣ ಕಾಸರಗೋಡು ಜಿಲ್ಲೆಯ ಬೇಕಲ ಕೋಟೆ ಮತ್ತು ಪುಣ್ಯ ಕ್ಷೇತ್ರ ಸುಬ್ರಹ್ಮಣ್ಯ ಸಂಪರ್ಕಿಸುವ ನಿಟ್ಟಿನಲ್ಲಿ ಬೇಕಲ, ಬಂದಡ್ಕ, ಸುಳ್ಯ, ಸುಬ್ರಹ್ಮಣ್ಯ ಅಂತಾರಾಜ್ಯ ಮಾರ್ಗದಲ್ಲಿ ಸರಕಾರಿ ಬಸ್ ಸರ್ವೀಸ್ ಆರಂಭಿಸಲು ಎಲ್ಲಾ ಪ್ರಯತ್ನ ನಡೆಸಲಾಗುವದು ಎಂದು ಉದುಮ ಕ್ಷೇತ್ರದ ಶಾಸಕ ಸಿ.ಎಚ್.ಕುಂಞಂಬು ಅವರು ತಿಳಿಸಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗು ಬಂದಡ್ಕ ಗೌಡ ಗ್ರಾಮ ಸಮಿತಿಯ ವತಿಯಿಂದ ಬಂದಡ್ಕದಲ್ಲಿ ನಡೆದ ಅರೆಭಾಷೆ ಗಡಿನಾಡ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಅವರು ಈ ವಿಷಯ ತಿಳಿಸಿದರು. ಅಂತಾರಾಜ್ಯ ಬಸ್ ಸರ್ವೀಸ್ ಆರಂಭಿಸಬೇಕು ಎಂದು ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಬಂದಡ್ಕದ ಪ್ರಮುಖರು ಮನವಿ ಸಲ್ಲಿಸಿದರು. ಈ ಮಾರ್ಗದಲ್ಲಿ ಹೊಸ ಬಸ್ ರೂಟ್ ಮಂಜೂರು ಮಾಡಿಸಿ ಕೇರಳದಿಂದ ಹಾಗೂ ಕರ್ನಾಟಕ ಸರಕಾರಿ ಬಸ್ ಸರ್ವೀಸ್ ನಡೆಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.