ಮಂಗಳೂರು: ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು
ಅಧಿಸೂಚಿಸಲಾಗಿದೆ. ಈ ಸಾಲಿನಲ್ಲಿ ಸದರಿ ಯೋಜನೆಯಡಿ ನೋಂದಾವಣೆಗೊಳ್ಳಲು ಬೆಳೆ ವಿಮೆ ಮಾಡಿಸಲಾಗುವ ಬೆಳೆಯು ರೈತರ ಸರ್ವೇ ನಂಬರ್ನಲ್ಲಿ ಬೆಳೆ ಸಮೀಕ್ಷೆಯಡಿ ನಮೂದಿಸುವುದು ಕಡ್ಡಾಯಗೊಳಿಸಲಾಗಿದೆ. ಬೆಳೆ ಸಮೀಕ್ಷೆಯಡಿ ವಿಮೆ ಮಾಡಿಸಲಾಗುವ ಬೆಳೆಯು ನಮೂದಾಗದಿದ್ದ ಪಕ್ಷದಲ್ಲಿ, ಇದೇ ಸೆ.15ರೊಳಗೆ ಬೆಳೆ ಸಮೀಕ್ಷೆ ಮಾಡಿ ಬೆಳೆ ನಮೂದಿಸಬೇಕು. ತಪ್ಪಿದಲ್ಲಿ ಅಂತಹ ರೈತರ ನೋಂದಾವಣೆಯು ತಿರಸ್ಕೃತವಾಗುತ್ತದೆ. ಆದ್ದರಿಂದ ಅಂತಹ ರೈತರು ತಾವೇ ಖುದ್ದಾಗಿ ಅಥವಾ ಬೆಳೆ ಸಮೀಕ್ಷೆ ಕೈಗೊಳ್ಳಲು ತಮ್ಮ ಗ್ರಾಮಕ್ಕೆ ನಿಯೋಜಿತರಾಗಿರುವ ಖಾಸಗಿ ನಿವಾಸಿಗಳ ಮೂಲಕ ಕಡ್ಡಾಯವಾಗಿ ಬೆಳೆ ಸಮೀಕ್ಷೆ ಕೈಗೊಂಡು ವಿಮೆ ಮಾಡಿಸಿರುವ ಬೆಳೆಯನ್ನು ಬೆಳೆ ಸಮೀಕ್ಷೆಯಡಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ತಾಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.