ಸುಳ್ಯ:ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಉಂಟಾಗಿರುವುದನ್ನು ವಿರೋಧಿಸಿ ಮಲೆನಾಡು ಜನಹಿತರಕ್ಷಣಾ ವೇದಿಕೆಯ ವತಿಯಿಂದ ಡಿ.24ರಂದು ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಕೊನೆಯಲ್ಲಿ ಪ್ರತಿಭಟನಾಕಾರರು ನೀಡಿದ
ಮನವಿಯನ್ನು ಸ್ವೀಕರಿಸಲು ತಹಶೀಲ್ದಾರ್ ಅವರೇ ಆಗಮಿಸಬೇಕು ಎಂದು ಪಟ್ಟು ಹಿಡಿದು ತಾಲೂಕು ಕಚೇರಿ ಮುಂದೆ ಧರಣಿ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ. ತಹಶೀಲ್ದಾರ್ ಅವರು ಮಂಗಳೂರಿಗೆ ಮೀಟಿಂಗ್ಗೆ ತೆರಳಿದ ಕಾರಣ ಉಪ ತಹಶೀಲ್ದಾರ್ ಅವರು ಮನವಿ ಸ್ವೀಕರಿಸಲು ಆಗಮಿಸಿದರು. ರೈತರು ಮುಂದಿರಿಸಿದ ಕೆಲವೊಂದು ಪ್ರಶ್ನೆಗಳಿಗೆ ಸ್ಪಷ್ಟವಾದ ಉತ್ತರ ಬಾರದೇ ಇದ್ದ ಕಾರಣ ತಹಶೀಲ್ದಾರ್ ಅಥವಾ ಸಹಾಯಕ ಕಮೀಷನರ್ ಆಗಮಿಸಿ ಮಾಹಿತಿ ನೀಡಿ ಮನವಿ ಸ್ವೀಕರಿಸಬೇಕು ಎಂದು ಒತ್ತಾಯಿಸಿ ಧರಣಿ ಮುಂದುವರಿಸಿದ್ದಾರೆ.
ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.
















