ಬೆಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ವಿಮಾ ಕಂಪನಿಗಳು ಮತ್ತು ಸರ್ಕಾರದ ಸಮೀಕ್ಷಾ ವಿಭಾಗವು ರೈತರ ಹಿತರಕ್ಷಣೆಯಲ್ಲಿ ವಿಫಲವಾಗಿವೆ. ಆದುದರಿಂದ
ವಿಮಾ ಮೊತ್ತ ಬಾಕಿ ಕೂಡಲೇ ಪಾವತಿಸುವಂತೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕೃಷಿಕರ ವಿಮಾ ಬಾಕಿ ಮೊತ್ತ ಕೂಡಲೇ ಪಾವತಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಬಾರಿ ಬೆಳೆ ಸಮೀಕ್ಷೆಯು ಅವೈಜ್ಞಾನಿಕವಾಗಿ ನಡೆದಿದ್ದು, ಇದನ್ನು ಸರಿಪಡಿಸಿ ಉಳಿದ ಮೊತ್ತ ರೈತರಿಗೆ ತಕ್ಷಣವೇ ಬಿಡುಗಡೆ ಮಾಡಲು ವಿಮಾ ಕಂಪನಿಗಳಿಗೆ ಸರ್ಕಾರ ಗಡುವು ನೀಡಬೇಕು ಎಂದು ಕಿಶೋರ್ ಕುಮಾರ್ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





