ಪೆರುವಾಜೆ:ಬೆಳ್ಳಾರೆಯ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನದ ಆಚರಣೆ ಹಮ್ಮಿಕೊಳ್ಳಲಾಗಿತ್ತು.ನಿವೃತ್ತ ಗ್ರಂಥ ಪಾಲಕರಾದ ರಾಮಚಂದ್ರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ
ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸುವ ಮನೋಭಾವ ಮತ್ತು ಗುರಿಯ ಕಡೆಗೆ ನಡೆಯಲು ಬೇಕಾದ ಶಿಸ್ತು – ಬದ್ಧತೆ ರೂಢಿಸಿಕೊಳ್ಳುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಅತ್ಯಂತ ಪರಿಣಾಮಕಾರಿ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ಮಾತನಾಡಿ ಎನ್.ಎಸ್.ಎಸ್. ಘಟಕವು ವಿದ್ಯಾರ್ಥಿಗಳಲ್ಲಿ ರಚನಾತ್ಮಕತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಎನ್.ಎಸ್.ಎಸ್. ಘಟಕದ ಕಾರ್ಯಕ್ರಮ ಅಧಿಕಾರಿ ಗಿರೀಶ್ ಸಿ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಖ್ಯಾತಿ ಕಾರ್ಯಕ್ರಮ ನಿರೂಪಿಸಿ, ಶಿವರಾಜು ಸ್ವಾಗತಿಸಿ ಕಾವ್ಯ ವಂದಿಸಿದರು.