ಬೆಳ್ಳಾರೆ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಸುಳ್ಯ ತಾಲೂಕು ಪಂಚಾಯತ್ ಹಾಗೂ ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಬೆಳ್ಳಾರೆಯಲ್ಲಿ ಗ್ರಾಮ ಸಂಭ್ರಮ – 2023 ಕಾರ್ಯಕ್ರಮ ನಡೆಯಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ

ಚಾಲನೆ ನೀಡಿದರು.ಗ್ರಾಮ ಪಂಚಾಯತ್ನ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಕಾರ್ಯಕ್ರಮ, ಬೆಳ್ಳಾರೆಯ ಐತಿಹಾಸಿಕ ಬಂಗ್ಲೆಗುಡ್ಡೆ ಅಭಿವೃದ್ಧಿಗೆ ಶಿಲಾನ್ಯಾಸ, ಗ್ರಾಮ ಪಂಚಾಯತ್ ಕಚೇರಿಯ ಸ್ಥಳಾಂತರ ಮತ್ತು ಸಂಜೀವಿನಿ ಕಟ್ಟಡ ಲೋಕಾರ್ಪಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಂಗಾರ ಅವರು ಸುಳ್ಯ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಎಂಬ ಟೀಕೆ ಮಾಡುತ್ತಿದ್ದಾರೆ. ಆದರೆ 1994ರ ಹಿಂದೆ ಸುಳ್ಯ ಹೇಗಿತ್ತು ಎಂಬುದನ್ನು ಗಮನಿಸಬೇಕು. ಅನೇಕ ಕಡೆಗಳಲ್ಲಿ ಇದ್ದ ಮುಳುಗು ಸೇತುವೆಗಳು ಇಂದು ಸರ್ವಋತು ಸೇತುವೆಗಳಾಗಿವೆ. ಬೆಳ್ಳಾರೆ ಗ್ರಾಮ ಪಂಚಾಯತ್ ಒಂದಕ್ಕೆ ಎರಡು ವರ್ಷದಲ್ಲಿ ಸುಮಾರು 10 ಕೋಟಿ ರೂಪಾಯಿಯ ಅಭಿವೃದ್ಧಿ ಅನುದಾನ ನೀಡಲಾಗಿದೆ ಎಂದು ಹೇಳಿದರು ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆ ಗ್ರಾ.ಪಂ. ಉಪಾಧ್ಯಕ್ಷೆ, ಗೌರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮಪ್ರಸಾದ್ ಯಂ.ಆರ್., ಅಮರ ಸುಳ್ಯ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಡಾ.ಪ್ರಭಾಕರ ಶಿಶಿಲ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ವೀಣಾ ಎಂ.ಟಿ.,ಪ್ರಮುಖರಾದ ಆರ್.ಕೆ.ಭಟ್ ಕುರುಂಬುಡೇಲು, ಶ್ರೀರಾಮ ಪಾಟಾಜೆ, ಅನಿಲ್ ರೈ, ಎನ್.ಎಸ್.ಡಿ.ವಿಠಲದಾಸ್, ತಾ.ಪಂ.ಅಧೀಕ್ಷಕಿ ಜಯಲಕ್ಷ್ಮಿ, ಸಂಜೀವಿನಿ ಒಕ್ಕೋಟದ ಅಧ್ಯಕ್ಷೆ ಗುಣವತಿ ಗ್ರಾ.ಪಂ.ಸದಸ್ಯರು ಹಾಗೂ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಸೇವೆ ನೀಡಿದ ನಾಲ್ಕು ಮಂದಿ ಆಶಾ ಕಾರ್ಯಕರ್ತೆಯರಿಗೆ ಹಾಗೂ ಆಪತ್ಕಾಲದಲ್ಲಿ ಸಹಾಯ ನೀಡಿದ ಆಂಬುಲೆನ್ಸ್ ಚಾಲಕ ಸದಾಶಿವ ಮಣಿಯಾಣಿ ಹಾಗೂ ಸ್ವಚ್ಛತೆಯಲ್ಲಿ ವಿಶೇಷ ಸೇವೆ ಸಲ್ಲಿಸಿದ ಕೊರಗಪ್ಪ ಪಾಟಾಜೆ, ಉರಗತಜ್ಞ ಅಜರುದ್ದೀನ್ ಅವರನ್ನು ಸನ್ಮಾನಿಸಲಾಯಿತು. ವಿಕಲಚೇತನರಿಗೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಸಚಿವರು ವಿತರಿಸಿದರು. ಗ್ರಾಮ ಪಂಚಾಯತ್ ಸದಸ್ಯ ಅನಿಲ್ ರೈ ಸ್ವಾಗತಿಸಿದರು, ಅಭಿವೃದ್ಧಿ ಅಧಿಕಾರಿ ಶ್ಯಾಂಪ್ರಸಾದ್ ವಂದಿಸಿದರು, ಪ್ರದೀಪ್ ಕುಮಾರ್ ರೈ ಪನ್ನೆ, ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ, ಸ್ವಯಂಪ್ರೇರಿತ ರಕ್ತದಾನ ಶಿಬಿರ, ಉಚಿತವಾಗಿ ಕಾರ್ಡ್ಗಳ ನೋಂದಣಿ ನಡೆಯುತು