ಬೆಳ್ಳಾರೆ:ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ನ ವಸಂತ ಸಂಭ್ರಮದ ಪ್ರಯುಕ್ತ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು.ಒಸಾಟ್ ಸಂಸ್ಥೆ ನೀಡಿದ 8 ಕೊಠಡಿಗಳು ಸೇರಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಗಣ್ಯರು ಉದ್ಘಾಟಿಸಿದರು.
ಪದವಿ ಪೂರ್ವ ವಿಭಾಗದ ನೂತನ 3 ಕೊಠಡಿಗಳು, ಪ್ರಾಥಮಿಕ ಶಾಲೆಗೆ
ಒಸಾಟ್ ಪ್ರಯೋಜಕತ್ವದ 8 ಕೊಠಡಿಗಳು, ನವೀಕೃತ ಕ್ರೀಡಾಂಗಣ, ಪ್ರಾಥಮಿಕ ಶಾಲೆಗೆ
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹಾಗೂ ದಾನಿಗಳ ನೆರವಿನಿಂದ ಪ್ರಾಥಮಿಕ ಶಾಲೆಗೆ ನಿರ್ಮಿಸಿದ 3 ತರಗತಿ ಕೊಠಡಿಗಳ ಉದ್ಘಾಟನೆ ನಡೆಯಿತು.ಶಾಸಕಿ ಭಾಗೀರಥಿ ಮುರುಳ್ಯ,
ಕರ್ನಾಟಕ ಪಬ್ಲಿಕ್ ಸ್ಕೂಲ್ನ ವಸಂತ ಸಂಭ್ರಮ ಸ್ವಾಗತ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್.ಯು.ಕೆ, ಒಸಾಟ್ ಸಂಸ್ಥೆಯ ಅಮೇರಿಕದ ಅಧ್ಯಕ್ಷ ಬಿ.ವಿ.ಜಗದೀಶ, ಬೆಳ್ಳಾರೆ

ಗ್ರಾ.ಪಂ.ಅಧ್ಯಕ್ಷೆ ನಮಿತಾ ಎಲ್ ರೈ, ಸದಸ್ಯರಾದ ಅನಿಲ್ ರೈ ಚಾವಡಿಬಾಗಿಲು, ಎನ್.ಎಸ್.ಡಿ. ವಿಠಲದಾಸ್ ಅತಿಥಿಗಳಾಗಿದ್ದರು. ವಸಂತ ಸಂಭ್ರಮ ಸಮಿತಿ ಅಧ್ಯಕ್ಷೆ ರಾಜೀವಿ ಆರ್ ರೈ, ಸಂಚಾಲಕರಾದ ಎಸ್.ಎನ್.ಮನ್ಮಥ, ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀನಾಥ್ ರೈ ಬಾಳಿಲ, ವಸಂತ ಸಂಭ್ರಮ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ,ಪ್ರಾಂಶುಪಾಲರಾದ ಜನಾರ್ದನ ಕೆ. ಎನ್.
ಉಪ ಪ್ರಾಂಶುಪಾಲರಾದ ಉಮಾಕುಮಾರಿ, ಶಾಲಾ ಮುಖ್ಯ ಶಿಕ್ಷಕ ಮಾಯಿಲಪ್ಪ ಜಿ.ಒಸಾಟ್ ಸಂಸ್ಥೆಯಭಾರತೀಯ ಅಧ್ಯಕ್ಷ ವಾದಿರಾಜ ಭಟ್, ಕಾರ್ಯನಿರ್ವಹಣಾಧಿಕಾರಿ ಬಾಲಕೃಷ್ಣ ರಾವ್, ಪ್ರಾಜೆಕ್ಟ್ ಮ್ಯಾನೇಜರ್ ಕಿಶೋರ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
