ಬೆಳ್ಳಾರೆ:ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಸಂತ ಸಂಭ್ರಮದ ಅಂಗವಾಗಿ ಎರಡನೇ ದಿನವಾದ ಜ.4ರಂದು ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಸಂಭ್ರಮ ಮನಸೂರೆಗೊಂಡಿತು.ಜ.4ರಂದು ಪೂ. 9.30ರಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ.ಅಪರಾಹ್ನ ನಡೆದ
ಸನ್ಮಾನ ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ ಸಮಾರಂಭದ
ಅಧ್ಯಕ್ಷತೆ ವಹಿಸಿದ್ದರು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರರತ್ನ ಕೆ.ಸೀತಾರಾಮ ರೈ ಸವಣೂರು ಸನ್ಮಾನ ನೆರವೇರಿಸಿದರು.ವಿಶೇಷ ಆಹ್ವಾನಿತರಾಗಿ ಉದ್ಯಮಿ ಜಗನ್ನಾಥ ಶೆಟ್ಟಿ ಪನ್ನೆಗುತ್ತು, ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ನ ಸಂಚಾಲಕರಾದ ಎಂ.ಪಿ.ಉಮೇಶ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀಣಾ, ಸದಸ್ಯರಾದ ಮಣಿಕಂಠ, ಜಯಶ್ರೀ,ಭವ್ಯ ಆರ್ ಉಪಸ್ಥಿತರಿದ್ದರು.ದ.ಕ.ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು, ಕೆ.ಪಿ.ಎಸ್. ಶಾಲೆಯಲ್ಲಿ ಪ್ರಾಂಶುಪಾಲರಾಗಿ, ಉಪಪ್ರಾಂಶುಪಾಲರಾಗಿ, ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿದವರು ಹಾಗೂ ನಿರಂತರ 15 ವರ್ಷಗಳು ಹಾಗೂ ಅದಕ್ಕಿಂತ ಮೇಲ್ಪಟ್ಟು ಸೇವೆ ಸಲ್ಲಿಸಿದ ಶಿಕ್ಷಕರನ್ನು, ವಿಶೇಷ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ವಸಂತ ಸಂಭ್ರಮ ಸಮಿತಿಯ ಗೌರವಾಧ್ಯಕ್ಷ ಮಾಜಿ ಸಂಸದ ನಳಿನ್ಕುಮಾರ್ ಕಟೀಲ್, ಅಧ್ಯಕ್ಷೆ ರಾಜೀವಿ ಆರ್.ರೈ, ಸಂಚಾಲಕರಾದ ಎಸ್.ಎನ್.ಮನ್ಮಥ,ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ, ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀನಾಥ್ ರೈ ಬಾಳಿಲ,
ಪ್ರಾಂಶುಪಾಲರಾದ ಜನಾರ್ದನ ಕೆ. ಎನ್.ಉಪಪ್ರಾಂಶುಪಾಲರಾದ ಉಮಾಕುಮಾರಿ, ಶಾಲಾ ಮುಖ್ಯ ಶಿಕ್ಷಕ ಮಾಯಿಲಪ್ಪ ಜಿ.ಮತ್ತಿತರರು ಉಪಸ್ಥಿತರಿದ್ದರು.ಬೆಳಿಗ್ಗಿನಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಿತು. ಸಂಜೆ’ಸಾಂಸ್ಕೃತಿಕ ರಸ ಸಂಜೆ ಮನಸೂರೆಗೊಂಡಿತು.