ಬೆಳ್ಳಾರೆ:ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಕೃಷ್ಣ ಭಟ್ ಕುರುಂಬುಡೇಲು ಮತ್ತು ಉಪಾಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಪೆರುವಾಜೆ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಸಂದರ್ಭದಲ್ಲಿ ಅಧ್ಯಕ್ಷತೆಗೆ ರಾಮಕೃಷ್ಣ ಭಟ್ ಕುರುಂಬುಡೇಲು ಮತ್ತು ಉಪಾಧ್ಯಕ್ಷತೆಗೆ ಪದ್ಮನಾಭ ಶೆಟ್ಟಿ ಪೆರುವಾಜೆ ಮಾತ್ರ ನಾಮಪತ್ರ ಸಲ್ಲಿಸಿದ್ದ

ಕಾರಣ ಅವಿರೋಧವಾಗಿ ಆಯ್ಕೆ ನಡೆಯಿತು. ಇತ್ತೀಚೆಗೆ ನಡೆದ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನ ಪಡೆದು ಅಧಿಕಾರಕ್ಕೇರಿದ್ದರು.ಸಹಕಾರ ಇಲಾಖೆಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಚುನಾವಣಾಧಿಕಾರಿಯಾಗಿದ್ದರು.ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುನಂದ ಆಳ್ವ, ನಿರ್ದೇಶಕರು ಉಪಸ್ಥಿತರಿದ್ದರು.