ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಹರ್ ಘರ್ ಸ್ವಚ್ಛತಾ ಕಾರ್ಯಕ್ರಮ, ನಡೆಯಿತು. ಬೆಳ್ಳಾರೆ ಕೆಳಗಿನ ಪೇಟೆಯಿಂದ ಪ್ರಾರಂಭಗೊಂಡು ಮೇಲೆ ಪೇಟೆಯ ತನಕ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು, ಈ ಸಂದರ್ಭದಲ್ಲಿ

ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್.ರೈ, ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ ಅಕ್ಷಯ ಯುವಕ ಮಂಡಲ ನೆಟ್ಟಾರು, ಬೆಳ್ಳಾರೆ ಲಕ್ಷ್ಮಿ ಸಂಜೀವಿನಿ ಸಂಘ, ಸ್ನೇಹಶ್ರೀ ಮಹಿಳಾ ಮಂಡಲ ದ ಪದಾಧಿಕಾರಿಗಳು, ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಇತರ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು. ಈ ಸಂಧರ್ಭ ಸ್ವಚ್ಛತಾ ಪ್ರತಿಜ್ಞೆ ಸ್ವೀಕಾರ ಮಾಡಲಾಯಿತು





