ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ಕೆ.ವಿ ರೇಣುಕಾಪ್ರಸಾದ್ ಮತ್ತು ಕುಟುಂಬದವರು ಬೆಳ್ಳಿ ರಥ ಸಮರ್ಪಣೆಗೆ ಸಂಕಲ್ಪ ಮಾಡಿದ್ದು ಅದಕ್ಕೆ ಪೂರ್ವಭಾವಿಯಾಗಿ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ ಜೂ.14 ರಂದು ನಡೆಯಿತು. ದೇವಾಲಯದಲ್ಲಿ
ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಿದ ಬಳಿಕ ಬೆಳ್ಳಿರಥ ನಿರ್ಮಾಣಕ್ಕೆ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಕುಟುಂಬಸ್ಥರು ರಥ ನಿರ್ಮಾಣಕ್ಕೆ ರಥಶಿಲ್ಪಿ ರಾಜಗೋಪಾಲ್ ಆಚಾರ್ಯ ಅವರಿಗೆ ವೀಳ್ಯ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಅನುಮತಿ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಭರತ್ ಮುಂಡೋಡಿ, ನಿತ್ಯಾನಂದ ಮುಂಡೋಡಿ, ಮೋಹನ್ ರಾಮ್ ಸುಳ್ಳಿ, ರಥಶಿಲ್ಪಿ ರಾಜಗೋಪಾಲ್ ಆಚಾರ್ , ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಮಾಸ್ಟರ್ ಪ್ಲಾನ್ ಸದಸ್ಯರು, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.