ಸುಳ್ಯ: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಬಿ.ಇ. ರಮೇಶ್ ಎಂಬವರು ನೇಮಕಗೊಂಡಿದ್ದಾರೆ.ಚಾಮರಾಜನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಉಪನ್ಯಾಸಕರಾಗಿದ್ದ ಬಿ.ಇ. ರಮೇಶ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪದೋನ್ನತಿಯಾಗಿದ್ದು, ಅವರು ಸುಳ್ಯಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ. ಪಿರಿಯಾಪಟ್ಟಣ ತಾಲೂಕು ದೊಡ್ಡ ಬೆಳಾಲಿನವರು. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ.ಮಹದೇವ್ ಅವರು ವರ್ಗಾವಣೆಯಾದ ಬಳಿಕ ವೀಣಾ ಎಂ.ಟಿ.ಪ್ರಭಾರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.