ಸುಳ್ಯ:ಹಳೆಗೇಟು ಬೆಟ್ಟಂಪಾಡಿಯ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನೇಮೋತ್ಸವ ಇಂದು(ಮಾ.19) ನಡೆಯಲಿದೆ. ಇಂದು ಸಂಜೆ 7ರಿಂದ ಬೆಟ್ಟಂಪಾಡಿ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ವೈಭವ, ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಟ್ಟಂಪಾಡಿ ಅವರಿಂದ
ಭಜನೆ ಕಾರ್ಯಕ್ರಮ ನಡೆಯಲಿದೆ. ಸಂಜೆ.7.45ಕ್ಕೆ ಭಂಡಾರ ತೆಗೆಯುವುದು. ರಾತ್ರಿ 8ರಿಂದ ವಿಠಲ ನಾಯಕ್ ಮತ್ತು ಬಳಗದವರಿಂದ ‘ಗೀತ ಸಾಹಿತ್ಯ ಸಂಭ್ರಮ’ ನಡೆಯಲಿದೆ. ರಾತ್ರಿ 10ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ ಎಂದು ಬೆಟ್ಟಂಪಾಡಿ ಸ್ವಾಮಿ ಕೊರಗಜ್ಜ ದೈವಸ್ಥಾನ ಸಮಿತಿಯ ಅಧ್ಯಕ್ಷ ಚಿದಾನಂದ ವಿದ್ಯಾನಗರ ಹಾಗೂ ನೇಮೋತ್ಸವ ಸಮಿತಿ ಅಧ್ಯಕ್ಷರಾದ ಲತಾ ಮಧುಸೂಧನ್ ತಿಳಿಸಿದ್ದಾರೆ.









