ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ಹೇಳಿದರು. ಬಿಜೆಪಿ ಮುಖಂಡರ ಜೊತೆ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿ ಘಟನೆಯನ್ನು
ಖಂಡಿಸುವುದಾಗಿ ಹೇಳಿದ ಭಾಗೀರಥಿ ಮುರುಳ್ಯ
ಹಿಂದುಗಳ ಪರವಾಗಿ ಯುವಕರ ಪರವಾಗಿ ಧ್ವನಿ ಎತ್ತಲು ನಾನು ಸಿದ್ಧಳಾಗಿದ್ದೇನೆ. ಈ ಬಗ್ಗೆ ವಿಧಾನಸೌಧದಲ್ಲಿ ಧ್ವನಿ ಎತ್ತುವುದಾಗಿ ಅವರು ಹೇಳಿದ್ದಾರೆ. ಘಟನೆಯ ಬಗ್ಗೆ ಶಾಸಕಿ ಭಾಗೀರಥಿರವರಿಗೆ ಹಿಂದು ಮುಖಂಡ ಅರುಣ್ಕುಮಾರ್ ಪುತ್ತಿಲರವರು ಮಾಹಿತಿ ನೀಡಿದರು. ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿ.ಪಂ, ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಇಂದಿರಾ ಬಿ.ಕೆ ,ಸುಳ್ಯ ಬಿಜೆಪಿ ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಸುನೀಲ್ ಕೇರ್ಪಳ, ರೈತ ಮೋರ್ಚ್ ಜಿಲ್ಲಾ ಉಪಾಧ್ಯಕ್ಷ ಮಹೇಶ್ ರೈ ಮೇನಾಲ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯ್ಕುಮಾರ್ ಕಂದಡ್ಕ ಮತ್ತಿತರರು ಇದ್ದರು.