ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರಕಾರ ಹೊಸತಾಗಿ ಘೋಷಣೆ ಮಾಡಿರುವ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಹಾಗೂ ನೊಂದಣಿ ಪ್ರಕ್ರಿಯೆಯ ಪರಿಶೀಲನೆ, ಹಾಗೂ ಕಾರ್ಯಕರ್ತರ ವಿಶೇಷ ಸಭೆ ಮತ್ತು
ಸಂವಾದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಭಾರತ್ ಜೋಡೋ ಯುವ ಸಂಘ ರಚನೆಯ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾದ ಶುಭಾಷ್ ಚಂದ್ರ ಶೆಟ್ಟಿ ಮುಖ್ಯ ಭಾಷಣ ಮಾಡಿದರು. ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕ ಅಧ್ಯಕ್ಷ ದಿನೇಶ್ ಮೂಳೂರು,ಸಂತೋಷ್ ಭಂಡಾರಿ ಸಭೆಯಲ್ಲಿ ಉಪಸ್ಥಿತರಿದ್ದರು.












