ಸುಳ್ಯ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ನಡೆದು 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ರಾಮನಗರದಲ್ಲಿ ಸೆ.7ರಂದು ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದ್ದು. ಅದರ ನಂತರ ಸೆ.11 ರ ಮುಂಚಿತವಾಗಿ ಪ್ರತಿ ಜಿಲ್ಲೆಯಲ್ಲಿ 1 ಗಂಟೆ ಪಾದಯಾತ್ರೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ.
ದ.ಕ ಜಿಲ್ಲೆಯಲ್ಲಿ ನಡೆಯುವ
ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ನಡೆಸಬೇಕು ಎಂದು ಸುಳ್ಯದ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ. ಸುಳ್ಯದಲ್ಲಿ ಕಾರ್ಯಕರ್ತರಿಗೆ ಸಂಘಟನಾತ್ಮಕವಾಗಿ ಹೊಸ ಹುಮ್ಮಸ್ಸು ನೀಡಲು ಮತ್ತು ಪಕ್ಷ ಸಂಘಟನೆಗೆ ವೇಗ ದೊರಕುವ ನಿಟ್ಟಿನಲ್ಲಿ ಭಾರತ್ ಜೋಡೋ ನೆನಪಿಗಾಗಿ ನಡೆಯುವ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಸುಳ್ಯದಲ್ಲಿ ನಡೆಸಬೇಕು ಎಂದು ಸುಳ್ಯದ ಕಾಂಗ್ರೆಸ್ ಮುಖಂಡರಾದ ಮಹೇಶ್ ಕುಮಾರ್ ಕರಿಕ್ಕಳ, ಕೆ. ಗೋಕುಲ್ ದಾಸ್ ಸುಳ್ಯ, ಭವಾನಿಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆ, ಶಶಿಧರ್ ಎಂ ಜೆ, ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.