ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿಯು 71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಸ್ಪರ್ಧಿಸಲಿವೆ. ಇನ್ನುಳಿದ ಸ್ಥಾನಗಳನ್ನು ಇತರೆ ಸಣ್ಣ ಮೈತ್ರಿ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ.
ಬಿಹಾರ ವಿಧಾನಸಭೆ ಚುನಾವಣೆಯು ನವೆಂಬರ್ 6 ಮತ್ತು 11ರಂದು ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.















