ಪಾಟ್ನಾ:ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಎನ್ಡಿಎ ಒಕ್ಕೂಟ ನಿಚ್ಚಳ ಬಹುಮತದತ್ತ ಮುನ್ನಡೆದಿದೆ.243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಯು ನೇತೃತ್ವದ
ಎನ್ಡಿಎ ಮೈತ್ರಿಕೂಟವು 160 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಆ ಮೂಲಕ ಮ್ಯಾಜಿಕ್ ಸಂಖ್ಯೆ ಆದ 122 ಅನ್ನು ದಾಟಿ ಬಹುಮತ ಗಳಿಸುವುದು ನಿಚ್ಚಳವೆನಿಸಿದೆ.
ಮತ್ತೊಂದೆಡೆ ಆರ್ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ ಮೈತ್ರಿಯು 79 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.
ಇಂಡಿಯಾ ಮೈತ್ರಿಯ ಸಿಎಂ ಅಭ್ಯರ್ಥಿ, ಆರ್ಜೆಡಿ ನಾಯಕ ತೇಜಸ್ವಿ ಯಾದವ್, ರಘೋಪುರ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.
ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷವು ಎರಡು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.





