ಪಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ.ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಗ್ಗೆ ‘ಎಕ್ಸ್’ನಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯ ಸಭೆಗೆ ಆಯ್ಕೆಯಾದ ಹಿನ್ನಲೆಯಲ್ಲಿ
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಸಾಮ್ರಾಟ್ ಚೌದರಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾಗಿದ್ದು ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಪೋಸ್ಟ್ ಮಾಡಿರುವ ಚೌಧರಿ ಅವರು ಬಿಹಾರವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಸದಾ ಬದ್ಧರಿರುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.ಸಂಪೂರ್ಣ ಸಮರ್ಪಣೆ, ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ಎಲ್ಲರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವುದಾಗಿಎಂದು ತಿಳಿಸಿದ್ದಾರೆ.
ರಾಜ್ಯಸಭೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಿತೀಶ್ ಕುಮಾರ್ ಅವರ ಉತ್ತರಾಧಿಕಾರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ.
















