ಸುಳ್ಯ:ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಕನಕಮಜಲಿನ ಸತೀಶ್ ನೆಡಿಲು ಎಂಬವರು
ಬೈಕ್ ಸ್ಕಿಡ್ ಆಗಿ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಸೇರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.