ಸುಳ್ಯ:ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಬಿಜೆಪಿ ಮಂಡಲ ಸಮಿತಿ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ
ಸಮಾರಂಭ ಮೇ.16 ರಂದು ಮಂಗಳವಾರ ಪೂ.10.30ಕ್ಕೆ
ಕೇರ್ಪಳ ಬೂಡಿನ ಬಂಟರ ಭವನದಲ್ಲಿ ನಡೆಯಲಿದೆ. ಬಿಜೆಪಿಯ ಮತ್ತು ಪರಿವಾರ ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೆ ಸಮಾರಂಭದಲ್ಲಿ ಅಭಿನಂದನೆ ಸಲ್ಲಿಸಲಾಗುವುದು. ಬೂತ್ ಮಟ್ಟದ ಪೇಜ್ ಪ್ರಮುಖರು ,ಬೂತ್ ಏಜೆಂಟ್ಗಳು, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಮಂಡಲ, ಜಿಲ್ಲೆ, ರಾಜ್ಯಮಟ್ಟದವರೆಗಿನ ಎಲ್ಲಾ ಹಿರಿಯ ಕಿರಿಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು
ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ ಹಾಗೂ ರಾಕೇಶ್ ರೈ ಕೆಡೆಂಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.