ಸುಳ್ಯ:ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ನಗರದ ಜನಪ್ರತಿನಿಧಿಗಳಿಗೆ ಮತ್ತು ಸಿಎ ಬ್ಯಾಂಕಿನ ನಿರ್ದೇಶಕರಿಗೆ ಅಭ್ಯಾಸ ವರ್ಗ ಏರ್ಪಡಿಸಲಾಯಿತು. ಸುಳ್ಯ ಅಂಬೆಟಡ್ಕದ ಶ್ರೀ ವೆಂಕಟ್ರಮಣ ದೇವ ಮಂದಿರದ ಸಭಾ ಭವನದಲ್ಲಿ ನಡೆದ ಅಭ್ಯಾಸ ವರ್ಗವನ್ನು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ದೀಪ ಬೆಳಗಿಸಿ
ಉದ್ಘಾಟಿಸಿದರು. ಬಿಜೆಪಿ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ.ಎ.ಟಿ ಅಧ್ಯಕ್ಷತೆ ವಹಿಸಿದ್ದರು. ಅಭ್ಯಾಸ ವರ್ಗದ ಮೊದಲ ಅವಧಿಯನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್ ಹಾಗೂ ಎರಡನೇ ಅವಧಿಯನ್ನು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಅಪ್ಪಯ್ಯ ಮಣಿಯಾಣಿ ನಡೆಸಿಕೊಟ್ಟರು. ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ನ.ಪಂ.ಸದಸ್ಯರಾದ ಶಶಿಕಲಾ ಎ ಹಾಗೂ ಬುದ್ಧ ನಾಯ್ಕ ಮಾಡಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕುಸುಮಾಧರ ಎ.ಟಿ. ವಹಿಸಿದ್ದರು. ಅಪ್ಪಯ್ಯ ಮಣಿಯಾಣಿ ಸಮಾರೋಪ ಭಾಷಣ ಮಾಡಿದರು. ಶ್ರೀದೇವಿ ನಾಗರಾಜ ಭಟ್ ವೈಯುಕ್ತಿಕ ಗೀತೆ ಹಾಡಿದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ಸ್ವಾಗತಿಸಿದರು. ನ.ಪಂ
ಸದಸ್ಯೆ ಶೀಲಾವತಿ ಕುರುಂಜಿ ವಂದಿಸಿದರು. ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ. ಕಾರ್ಯಕ್ರಮ ನಿರೂಪಿಸಿದರು.