ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಅವರ 25 ವರ್ಷಗಳ ಆಡಳಿತದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಸೇವಾ ಪಾಕ್ಷಿಕದ ಅಂಗವಾಗಿ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಗುಂಡ್ಯದಲ್ಲಿ ಬೀದಿ ನಾಟಕ ಪ್ರದರ್ಶನದ
ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ನಾಟಕದ ಮೊದಲ ಪ್ರದರ್ಶನವೂ ನಡೆಯಿತು.
ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ಎಸ್.ಅಂಗಾರ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೆದಪ್ಪ, ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ ಮತ್ತು ಪ್ರಸನ್ನ ಮಾರ್ತ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ರೈ ಮನವಳಿಕೆ ಮತ್ತು ವಿನಯ್ ಕಂದಡ್ಕ, ಹರೀಶ್ ಕಂಜಿಪಿಲಿ, ಕುಸುಮಾಧರ ಎ.ಟಿ. ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
‘ವಿಶ್ವ ನಾಯಕ ನರೇಂದ್ರ ಮೋದಿ’ ನಾಟಕದ ರಚನೆಯನ್ನು ಕುಸುಮಾಧರ ಎ.ಟಿ ಅವರು ಮಾಡಿದ್ದಾರೆ. ಕುಸುಮಾಧರ ಎ.ಟಿ. ಮತ್ತುರಾಜ್ ಮುಖೇಶ್ ಸುಳ್ಯ ಅವರು ನಿರ್ದೇಶನ ಮಾಡಿದ್ದಾರೆ. ಹಾಡುಗಳ ಸಂಯೋಜನೆಯನ್ನು ರಾಜ್ ಮುಖೇಶ್ ಅವರು ಮಾಡಿದ್ದಾರೆ.ನಾಟಕದಲ್ಲಿ ಕುಸುಮಾಧರ ಎ.ಟಿ., ರಾಜ್ ಮುಖೇಶ್ ಸುಳ್ಯ, ಪುಷ್ಪರಾಜ್, ನಾರಾಯಣ ಎಸ್.ಎಂ., ಕೇಶವ ಮಾಸ್ಟರ್, ಚಿದಾನಂದ ವಿದ್ಯಾನಗರ, ಚಿನ್ಮಯಿ,ದುಷ್ಯಂತ್ ಕೆ ಸೇರಿದಂತೆ ಹಲವು ಕಲಾವಿದರು ಅಭಿನಯಿಸಲಿದ್ದಾರೆ.








